ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ: ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಎಣ್ಣೆಕಾಳು ಬೆಳೆಗ ಹೆಚ್ಚಿನ ಪ್ರೋತ್ಸಹ

  •  
  •  
  •  
  •  
  •    Views  

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಬೃಹನ್ಮಠದ ನ್ಯಾಯಪೀಠದಲ್ಲಿ ದಾವಣಗೆರೆ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಗಳೊಂದಿಗೆ  ಕೃಷಿ ಹಾಗೂ ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ನಿನ್ನೆ ಸಂವಾದ  ನಡೆಸಿದರು. ಸಂವಾದದಲ್ಲಿ  ದಾವಣಗೆರೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ,ರೈತ ಸಂಘದ ಅಧ್ಯಕ್ಷ ಎಚ್.ಆರ್ ಬಸವರಾಜಪ್ಪ ಸೇರಿದಂತೆ ವಿವಿಧ ಜಿಲ್ಲೆಯ ರೈತರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ರೈತ ಉತ್ಪಾದಕ ಕಂಪನಿಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟವನ್ನು ಏರ್ಪಡಿಸಲಾಗಿತ್ತು. ಬಳಿಕ ಸಚಿವೆ   ಶೋಭ ಕರಂದ್ಲಾಜೆ, ದೇಶದಲ್ಲಿ 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಬೇಕು, ಸ್ಟಾರ್ಟ್ ಅಪ್ ಗಳಿಂದ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೊಳಿಸಬೇಕು.  ಉತ್ತಮ ಮಾರುಕಟ್ಟೆ ಸ್ಥಾಪನೆಯಿಂದ ರೈತರ ಆದಾಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ರೈತರಿಗೆ ಎಣ್ಣೆಕಾಳು ಬೆಳೆಗಳನ್ನು ಹೆಚ್ಚಿಸಲು ಪ್ರೋತ್ಸಾಹ ನೀಡಲಾಗುತ್ತಿದೆ. ಎಣ್ಣೆಕಾಳು ಬಿತ್ತನೆ ಬೀಜಗಳನ್ನು ಉಚಿತ ಹಾಗೂ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ ಎಂದರು. ಭಾರತದ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸುವ ವೇಳೆಗೆ ಭಾರತ ವಿಶ್ವದ ಅಗ್ರಪಟ್ಟಿಯಲ್ಲಿರುವಂತೆ ಪ್ರಗತಿ ಹೊಂದಬೇಕು ಎಂಬುದು ಪ್ರಧಾನಿಯವರ ಅಭಿಲಾಷೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದರು.