ಆಡಳಿತಾಧಿಕಾರಿಗಳಾಗಿದ್ದ ಎಸ್.ಬಿ.ರಂಗನಾಥ್ ನಿಧನಕ್ಕೆ ತರಳಬಾಳು ಜಗದ್ಗುರುಗಳ ಸಂತಾಪ

  •  
  •  
  •  
  •  
  •    Views  

ಸಿರಿಗೆರೆ ಆ. 15: 

ಪ್ರೊ. ಎಸ್.ಬಿ. ರಂಗನಾಥ್ ಅವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಸಂತಾಪ ಸೂಚಿಸಿದ್ದಾರೆ.

ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲಾ ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ, ಕಾಲೇಜಿನ ಪ್ರಾಚಾರ್ಯರಾಗಿ, ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ತರಳಬಾಳು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಆನಂತರ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.

ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಆಶಿಸಿದ್ದಾರೆ. ಇವರ ಪತ್ನಿ ಮತ್ತು ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲೆಂದು ಹಾರೈಸಿದ್ದಾರೆ.

ಅವಿಭಜಿತ ಚಿತ್ರದುರ್ಗ ಜಿಲ್ಲೆ ಮತ್ತು ವಿಭಜಿತ ದಾವಣಗೆರೆ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿ, ಕುವೆಂಪು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿದ್ದರು. ನಗರದಲ್ಲಿ ಕುವೆಂಪು ಕನ್ನಡ ಭವನ ನಿರ್ಮಾಣಕ್ಕೆ ಅಪಾರವಾಗಿ ಶ್ರಮಿಸಿದ್ದರು.

ಪ್ರವೃತ್ತಿಯಲ್ಲಿ ಪತ್ರಕರ್ತರು, ಲೇಖಕರು, ಅನುವಾದಕರೂ ಆಗಿದ್ದರು. ಶಿಕ್ಷಣ, ಸಾಹಿತ್ಯ ಸೇರಿದಂತೆ, ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.