ಮೈಸೂರು ಮಹಾರಾಜ ಕಾಲೇಜಿಗೆ ಶ್ರೀ ತರಳಬಾಳು ಜಗದ್ಗುರುಗಳ ಭೇಟಿ

  •  
  •  
  •  
  •  
  •    Views  

ಪರಮ ಪೂಜ್ಯ ಶ್ರೀ ಜಗದ್ಗುರುಗಳವರು 1967 ರಲ್ಲಿ ವಿದ್ಯಾರ್ಥಿಗಳಾಗಿ ಪದವಿ ಶಿಕ್ಷಣವನ್ನು ಮೈಸೂರು ಮಹಾರಾಜ ಕಾಲೇಜಿನಲ್ಲಿ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ನಾತಕ ಪದವಿ ಪಡೆಯುವುದರೊಂದಿಗೆ 7ನೇ ರ‍್ಯಾಂಕ್ ಪಡೆದುಕೊಂಡಿದ್ದರು. ಸಂಸ್ಕೃತದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ್ದಕ್ಕಾಗಿ ಇವರಿಗೆ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ನೀಡಲಾಯಿತು.